Posts

Showing posts from July, 2018
Image
ಗಜಲ್ ೩೯(ಕಂಡಿದ್ದೇನೆ ) ಗಜಲ್ ೩೯ ಪ್ರಖರ ಸೂರ್ಯ ಚಂದ್ರ ರಿಗೆ ಗ್ರಹಣ ಹಿಡಿದಿರುವುದನ್ನು ನಾನು ಕಂಡಿದ್ದೇನೆ ಶಿಖರಗಳು ಕ್ಷಣಮಾತ್ರದಲ್ಲೇ ತರಗೆಲೆಯಂತೆ ಧರೆಗುರುಳಿರುವುದನ್ನು ನಾನು ಕಂಡಿದ್ದೇನೆ ಕೋಟಿ ಕಟ್ಡಿ ಕುಣಿದವರ ಬಗ್ಗೆ ಎಗರಿ ಹೇಳಬೇಡ ಮೀಸೆ ತಿರುವಿ ಮೆರೆದವರು ಮಣ್ಣಾಗಿರುವುದನ್ನು ನಾನು ಕಂಡಿದ್ದೇನೆ ಯಶಸ್ಸು ಪಡೆದವರ  ಕುರಿತು ಗರ್ವ ಪಡಬೇಡ ಚುಕ್ಕಿಗಳು ಜಾರಿ ಬೀಳುವುದನ್ನು ನಾನು ಕಂಡಿದ್ದೇನೆ. ಯಾರ  ಜ್ಞಾನದ ಆಳವನ್ನು ಕೊಂಡಾಡಬೇಡ ಸಾಗರಗಳು ಬತ್ತಿರುವುದನ್ನು ನಾನು ಕಂಡಿದ್ದೇನೆ ಬಾಹ್ಯ  ರೂಪದ ಬಗ್ಗೆ ಅಹಂಕಾರ ಪಡಬೇಡ ಮೊನಾಲಿಸಾ ಮಣ್ಣು ಸೇರಿದ್ದನ್ನು ನಾನು ಕಂಡಿದ್ದೇನೆ . ಜೀವನದಲ್ಲಿ ಗೆದ್ದೆನೆಂದು ಸೀಜೀವಿಯ ಮುಂದೆ  ಬೀಗಬೇಡ ಅಲೆಕ್ಸಾಂಡರ್ ಶರಣಾಗಿದ್ದನ್ನು ನಾನು ಕಂಡಿದ್ದೇನೆ *ಸಿ.ಜಿ.ವೆಂಕಟೇಶ್ವರ* *ಗೌರಿಬಿದನೂರು*